ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 02 ಹಾಗೂ 03ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬ-2026ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಕಾರ್ಯಕ್ರಮದಲ್ಲಿ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇರ್ಶ ಬಳಗದ ದಿಂದ ವಿಸ್ಮಯ ಜಾದೂ, ಮಜಾ ಟಾಕೀಸ್ ಕ್ಯಾತಿಯ ಅಶೋಕ್ ಪೊಳಲಿಯವರಿಂದ ವಿಭಿನ್ನ ಶೈಲಿಯ ಬೃಹತ್ ಗಾತ್ರದ ಕೋಳಿ ನೃತ್ಯ ಹಾಗೂ ರೋಬೋಟಿಕ್ ಪ್ರಾಣೀಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಉತ್ಸವ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
