ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಫೆಬ್ರವರಿ 01, 2026 ರಿಂದ ಮಾರ್ಚ 17, 2026ರವರೆಗೆ ಬೆಂಗಳೂರಿನ ಶ್ರೀ ಕಂಠಿರವ ಕ್ರೀಡಾಂಗಣದಲ್ಲಿ ಜಿಮ್ ಫಿಟ್ನೆಸ್ ತರಬೇತಿ ಶಿಬಿರವನ್ನು ಆಯೋಜಿಸಿದ್ದು, 18 ರಿಂದ 35 ವರ್ಷ ವಯೋಮಿತಿಯ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಯುವಕರು ಜನವರಿ 28 ರೊಳಗಾಗಿ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ತಡವಾಗಿ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
