ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಗಾಗಿ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್ (ಆರು ವಾರಗಳ ಪ್ರಮಾಣಪತ್ರ ಕೋರ್ಸ್, ಪಿ.ಜಿ ಡಿಪ್ಲೊಮಾ ಮತ್ತು ಎಂ.ಎಸ್ಸಿ ಕ್ರೀಡಾ ತರಬೇತಿ) ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಹಾಯಕ ನಿರ್ದೇಶಕರ ಕಾರ್ಯಾಲಯ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ರಾಯಚೂರು ಜಿಲ್ಲಾ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ದಿನಾಂಕ: 03-02-2026 ರೊಳಗಾಗಿ ಕಚೇರಿ ಅವಧಿಯಲ್ಲಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ರಾಯಚೂರು ಇಲ್ಲಿ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
