ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲೆಯ ಜಿಲ್ಲಾಧಿಕಾರಿಗಳ ನಿರ್ದೇಶಿಸಿದಂತೆ ದಿನಾಂಕ:26.01.2026 ರಂದು ಜರುಗುವ ಗಣರಾಜ್ಯೋತ್ಸವ ದಿನಾಚರಣೆ ಆಚರಿಸುವ ಅಂಗವಾಗಿ ರಾಯಚೂರು ನಗರದಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳು, ಹೋಟೆಲ್, ಸಂಘ, ಚೇಂಬರ ಆಫ್ ಕಾಮರ್ಸ, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಇತರೆ ಸಂಘ ಸಂಸ್ಥೆಗಳು ತಮ್ಮ ತಮ್ಮ ಕಟ್ಟಡಕ್ಕೆ ದೀಪಾಲಂಕಾರ ವ್ಯವಸ್ಥೆ ಕೈಗೊಳ್ಳಬೇಕೆಂದು ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
