ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಜನವರಿ 26ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 9ಗಂಟೆಗೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಲಾದ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10.30ಕ್ಕೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಯಚೂರು ಉತ್ಸವ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11ಗಂಟೆಗೆ ರಾಯಚೂರಿನಿಂದ ರಸ್ತೆ ಮೂಲಕ ದೇವದುರ್ಗ ತಾಲ್ಲೂಕಿನ ಗಬ್ಬೂರಿಗೆ ಪ್ರಯಾಣ ಬೆಳಸಿ, ಶ್ರೀ ಬೂದಿಬಸವಶ್ವರ ಮಹಾಸಂಸ್ಥಾನಮಠ ಗಬ್ಬೂರು ಇವರ ವತಿಯಿಂದ ಏರ್ಪಡಿಸಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಗಬೂರಿನಿಂದ ರಸ್ತೆ ಮೂಲಕ ಹೈದ್ರಾಬಾದಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
