ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಾಯಚೂರು ಕಚೇರಿಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ ಅನಾಥ, ಪರಿತ್ಯಕ್ತ, ಒಪ್ಪಿಸಲ್ಪಟ್ಟ, ಪೋಷಕರ ಸಂಪರ್ಕದಲ್ಲಿಲ್ಲದ ಮಕ್ಕಳನ್ನು ಗುರುತಿಸಿ ದತ್ತು ಪ್ರಕ್ರಿಯೇಗೆ ಒಳಪಡಿಸುವ ಜವಾಬ್ದಾರಿ ಒಳಗೊಂಡ ರಕ್ಷಣಾಧಿಕಾರಿ (ಅಸಾಂಸ್ಥಿಕ) ಸೃಜಿಸಿದ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾನ್ಯತೆಯುಳ್ಳ ವಿಶ್ವವಿದ್ಯಾಲಯದಿಂದ ಸಮಾಜ ಕಾರ್ಯ/ಸಮಾಜ ವಿಜ್ಞಾನ/ಮಕ್ಕಳ ಅಭಿವೃದ್ಧಿ/ಮಾನವ ಹಕ್ಕುಗಳ ಸಾರ್ವಜನಿಕ ಆಡಳಿತ/ಮನೋವಿಜ್ಞಾನ/ಮನಃಶಾಸ್ತ್ರ/ ಕಾನೂನು/ಸಾರ್ವಜನಿಕ ಆರೋಗ್ಯ/ಸಮೂದಾಯ ಸಂಪನ್ಮೂಲ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಹೊಂದಿರಬೇಕು. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಬಗ್ಗೆ ಕೆಲಸದ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಪರಿಣಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ದಿನಾಂಕ: 04-02-2026ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಲಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಯಲಯ ಮ.ನಂ. 1-9-138 ಮಾರೆಮ್ಮ ದೇವಸ್ಥಾನದ ಹತ್ತಿರ, ಆಜಾದ ನಗರ ರಾಯಚೂರು (ದೂ.ಸಂಖ್ಯೆ: 08532-226226) ಇಲ್ಲಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀ ಅಮರೇಶ ಹಾವಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
