ಕವಿತಾಳ : ನೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸರ್ಕಾರಿ ಇಲಾಖೆ ಹಾಗೂ ಖಾಸಗಿ ಸಂಸ್ಥೆಗಳು ಸಹಕರಿಸಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಜಸ್‌ಪಾಲ್ ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು ಸರ್ಕಾರಿ ಮತ್ತು ಖಾಸಗಿ, ಶಾಲಾ, ಕಾಲೇಜು, ಆಸ್ಪತ್ರೆ, ಬಸ್‌ನಿಲ್ದಾಣ, ಖಾಸಗಿ ವಾಣಿಜ್ಯ ಸಂಕೀರ್ಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು ಕಾಳಜಿವಹಿಸಬೇಕು, ಈಕುರಿತು ಸ್ಥಳಿಯ ಆಡಳೀತಕ್ಕೆ ಸೂಕ್ತ ಮಾಹಿತಿ ಒದಗಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು, ಬೀದಿ ನಾಯಿಗಳ ಹಾವಳಿ ತಡೆಯುವಲ್ಲಿ ಕಾಳಜಿ ತೋರದ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳ ವಿರುದ್ಧ ನ್ಯಾಯಾಲಯದ ಅದೇಶದಂತೆ ಕ್ರಮ ಕೈಗೊಳ್ಳಲಾಗುದು ಎಂದು ತಿಳಿಸಿದ್ದಾರೆ.
