ಮಕರ ಸಂಕ್ರಾಂತಿ ದಿನವೆ ಬ್ರಹ್ಮಕ್ಯರಾದ ಪ.ಪೂ.ಶ್ರೀ ಸಿದ್ದರಾಮನಂದಪುರಿ ಮಹಾಸ್ವಾಮಿಗಳು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ನ ಪರಮ ಪೂಜ್ಯರ 16ನೇ ದಿನದ ಪುಣ್ಯಾರಾಧನೆಯ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಪಂಚಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರನ್ನು ಭೇಟಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಸಂಸದರಾದ ಕೆ.ವಿರೂಪಾಕ್ಷಪ್ಪನವರು ಗಣ್ಯರನ್ನು ಆಹ್ವಾನಿಸಿದರು.
ಈ ಸಂದರ್ಭದಲ್ಲಿ: ಪರಮಪೂಜ್ಯರಾದ ಚಿದಾನಂದಯ್ಯ ಗುರುವಿನ್, ಮಾಜಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪುರೆ, ಶಾಸಕರಾದ ದೊಡ್ಡನಗೌಡ ಹೆಚ್.ಪಾಟೀಲ್, ರಾಘವೇಂದ್ರ ಹಿಟ್ನಾಳ್, ರಾಜ್ಯ ಕುರುಬರ ಸಂಘದ ಅಧ್ಯಕ್ಷರಾದ ಎಂ.ಈರಣ್ಣ, ಸಮಾಜದ ಮುಖಂಡರಾದ ಭೀಮಣ್ಣ ಮೇಟಿ, ಗುರುನಾಥ ಪೂಜಾರಿ ಅಧ್ಯಕ್ಷರು ಕುರುಬ ಗೊಂಡ ಸಮಾಜ ಕಲ್ಬುರ್ಗಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

