ರಾಯಚೂರು ಜನವರಿ 24 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 222 ರಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವದರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50000 ರೂ. ಮತ್ತು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 5000 ರೂ.ಗಳನ್ನು ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ರಾಯಚೂರು ಜಿಲ್ಲೆ ಮಾನವಿ ಪಟ್ಟಣದಲ್ಲಿ ದಾರುಸ್ಸಲಾಮ್ ಫೌಂಡೇಷನ್ ಟ್ರಸ್ಟ್ ಮಾನವಿ, ಈ ಸಂಸ್ಥೆಯವರು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸರಳ ವಿವಾಹ ಯೋಜನೆಯಡಿ ಅರ್ಜಿ ಸಲ್ಲಿಸಿದ ಒಟ್ಟು 111 ಜೋಡಿಗಳ ವಿವಾಹ ಕಾರ್ಯಕ್ರಮವು ದಿನಾಂಕ:18.01.2026 ರಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ 111 ಜೋಡಿಗಳಿಗೆ ಪ್ರತಿ ಜೋಡಿಗೆ 50000 ರೂ. ಮತ್ತು ಸಾಮೂಹಿಕ ವಿವಾಹಗಳನ್ನು ಏರ್ಪಡಿಸಿರುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 5000 ರೂ.ಗಳನ್ನು ನೀಡಲಾಗುವುದು. ಹಾಗೂ ಜಿಲ್ಲೆಗೆ ಈ ಯೋಜನೆಯಡಿ ಪ್ರಸ್ತುತ 200 ಫಲಾನುಭವಿಗಳಿಗೆ ಭೌತಿಕ ಗುರಿಯನ್ನು ನಿಗಧಿಪಡಿಸಲಾಗಿದ್ದು, ಅರ್ಹ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳು ಅರ್ಜಿ ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ಇತರೆ ರಾಜಕೀಯ ಮುಖಂಡರು, ಗಣ್ಯರು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಮತ್ತು ದಾರುಸ್ಸಲಾಮ್ ಫೌಂಡೇಷನ್ ಟ್ರಸ್ಟ್ ಮಾನವಿ, ಈ ಸಂಸ್ಥೆಯ ಅಧ್ಯಕ್ಷರು/ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಸೂಚನೆ: ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದ್ದು, ಅದಾಗ್ಯೂ ಕೆಲವು ಸ್ವಯಂ ಸೇವೆ ಸಂಸ್ಥೆಗಳು ಮತ್ತು ಅರ್ಜಿದಾರರು ತಾಂತ್ರಿಕ ಕಾರಣಗಳಿಂದ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ತೊಂದರೆ ಉಂಟಾದಲ್ಲಿ ಅಂತಹ ಸಂದರ್ಭದಲ್ಲಿ ಮಾತ್ರ ಅನುಮೋದಿತ ಆಫ್‌ಲೈನ್ ಅರ್ಜಿ ನಮೂನೆಗಳನ್ನು ಜಿಲ್ಲಾ/ ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಾಹಿತಿ ಕೇಂದ್ರ: ರಾಯಚೂರು 9731028420, ದೇವದುರ್ಗ 9148233616, ಲಿಂಗಸುಗೂರು 9886447863, ಮಾನವಿ 887334758 ಹಾಗೂ ಸಿಂಧನೂರು 8217621732ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರ

Leave a Reply

Your email address will not be published. Required fields are marked *