ಲಿಂಗಸಗೂರು : ಜ 25 .

ಸಚಿವ ತಿಮ್ಮಾಪೂರ ಅವರ ವಿರುದ್ಧ ನಡೆಯುತ್ತಿರುವ ರಜಕೀಯ ಪಿತೂರಿಗಳನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಸಚಿವರಿಗೆ ವಹಿಸಿದ ಇಲಾಖೆಯ ಕಾರ್ಯಗಳನ್ನು ಉತ್ತಮವಾಗಿ ನಿಭಾಯಿಸುತ್ತಿದ್ದು, ಬಾಗಲಕೋಟೆ ಜಿಲ್ಲೆಯನ್ನು ಅಭಿವೃದ್ಧಿ ಪತದತ್ತ ಮುನ್ನಡೆಸಿಕೊಂಡು ಹೋಗುತ್ತಿರುವುದು ಅವರ ವಿರೋಧಿಗಳಿಗೆ ಸಹಿಸದಾಗಿದೆ. ಅಲ್ಲದೇ ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನನಕ್ಕೆ ಬೆಳೆಯುತ್ತಿರುವ ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಅಬಕಾರಿ ಸಚಿವ ತಿಮ್ಮಪೂರ ಇವರೊಬ್ಬರನ್ನೇ ಗುರಿಯಾಗಿಸಿಕೊಂಡು ಪಟ್ಟಭದ್ರ ಹಿತಾಶಕ್ತಿಗಳು ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ .

ಆರ್.ಬಿ.ತಿಮ್ಮಾಪೂರು ರವರು ಹುಟ್ಟು ಹೋರಾಟಗಾರರು, ಅಲ್ಪಸಂಖ್ಯಾತರ ವರ್ಗಗಳಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾದವರಲ್ಲ, ಅವರೊಬ್ಬ ದಲಿತ ರಾಗಿರುವುದರಿಂದ ಅವರನ್ನು ಸಿಲುಕಿಸುವ ಕುತಂತ್ರ ಮಾಡಲಾಗುತ್ತಿದೆ. ಪ್ರಾಮಾಣಿಕ ನಾಯಕನ ವಿರುದ್ಧ ಯಾವುದೇ ಕುತಂತ್ರಗಳು ಫಲಿಸುವುದಿಲ್ಲ. ಸಚಿವರು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಅಧಿಕಾರಿಯ ಪಾತ್ರವಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ ಮಾಡುವುದನ್ನು ಬಿಟ್ಟು ಸಚಿವರ ವಿರುದ್ಧ ಪಿತೂರಿ ನಡೆಸುವುದು ತರವಲ್ಲ. ಈ ಕುತಂತ್ರಿಗಳ ವಿರುದ್ಧ ದಲಿತ, ಹಿಂದುಳಿದ, ಅಲ್ಪಸಂಖ್ಯಾ ತರು ಸೇರಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮಾಡಬೇಕಾಗುತ್ತದೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Leave a Reply

Your email address will not be published. Required fields are marked *