ಸಹನಾ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
ಮುದಗಲ್ ಪಟ್ಟಣದ ಕಿಲ್ಲದಲ್ಲಿರುವ ಸಹನಾ ಶಾಲೆಯಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ದೇಶಪ್ರೇಮದೊಂದಿಗೆ ಆಚರಿಸಲಾಯಿತು. ಭಾರತದ ಸಂವಿಧಾನವು ಜಾರಿಗೆ ಬಂದ ಈ ಐತಿಹಾಸಿಕ ದಿನದ ನೆನಪಿಗಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿತು.
ಕಾರ್ಯಕ್ರಮವು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭವಾಯಿತು ಶಾಲೆಯ ಮುಖ್ಯೋಪಾಧ್ಯಾಯರು ಶ್ರೀ ಆದಪ್ಪ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಎಲ್ಲರೂ ಏಕಕಂಠದಿಂದ ರಾಷ್ಟ್ರಗೀತೆಯನ್ನು ಹಾಡಿ, ಧ್ವಜಕ್ಕೆ ಗೌರವ ಸಲ್ಲಿಸಿದರು.ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನವನ್ನು ನಡೆಸಿಕೊಟ್ಟರು.
ಶಾಲೆಯ ವಿದ್ಯಾರ್ಥಿಗಳು ಜಾರಾ, ಅಮನ, ಅನಮ್, ಆಯೇಶಾ, ಸಪೂರ ,ಲುಕ್ಮಾನ್, ನಿಧಾ, ಸೈಫಾನ್, ಎಂ ಡಿ ಹುಸೇನ್, ಸುಫಿಯಾನ್, ಅರ್ಷದ ಮತ್ತು ಬಿಲಾಲ್ ಗಣರಾಜ್ಯೋತ್ಸವದ ಮಹತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯ ಬಗ್ಗೆ ಸ್ಪೂರ್ತಿದಾಯಕ ಭಾಷಣ ಮಾಡಿದರು.ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು, ಜಾನಪದ ನೃತ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ಕಿರುನಾಟಕಗಳನ್ನು ಪ್ರದರ್ಶಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಆಯೆಶಾ ಮತ್ತು ನೀಲು ಮಾತನಾಡುತ್ತಾ, “ವಿದ್ಯಾರ್ಥಿಗಳೇ ದೇಶದ ಭವಿಷ್ಯ. ಸಂವಿಧಾನದ ಆಶಯಗಳಾದ ಸಮಾನತೆ ಮತ್ತು ಸಹೋದರತೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು,” ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಪ್ರಿಯಾಂಕ, ಕವಿತಾ, ಹೀನ ಬೇಗಂ, ಜೀಶಾನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿಯಾದ ಅಸ್ಮ ಬೇಗಂ ನಿರೂಪಿಸಿದರು.ಸಿಹಿ ಹಂಚುವುದರೊಂದಿಗೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು.
