ಕುರುಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಸಾವು!

 

ತಾಲೂಕಿನ ಕುರುಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ 11:30ರ ವೇಳೆಗೆ ನಡೆದಿದೆ ಎನ್ನಲಾಗಿದೆ.

ಶಾಲೆಯಲ್ಲಿ ವಿರಾಮದ ವೇಳೆಯಲ್ಲಿ ಕುಡಿಯಲು ನೀರು ತರಲು ತೆರಳಿದ್ದ ಸಮಯದಲ್ಲಿ ವಿದ್ಯುತ್ ತಗುಲಿದ ಪರಿಣಾಮ ಗಂಭೀರವಾಗಿ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ, ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು ಸಹ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿದ ಬಳಿಕ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸುಜಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯ ಮೃತ ದೇಹವನ್ನು ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದ್ದು, ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡ ಆರ್.ಸಿದ್ದನಗೌಡ ಭೇಟಿ ನೀಡಿ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

Leave a Reply

Your email address will not be published. Required fields are marked *