*ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು* 

 

ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಬ್ರಹ್ಮಲೀನರಾದ ಪರಮಪೂಜ್ಯ ಶ್ರೀಸಿದ್ದರಾಮನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ ಕಾರ್ಯಕ್ರಮ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಫೆ.1ರಂದು ಮುಖ್ಯಮಂತ್ರಿಗಳು ರಾಯಚೂರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರೊಂದಿಗೆ ಜನವರಿ 31ರಂದು ಸಂಜೆ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್‌ನ ಶ್ರೀಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಮುಖ್ಯಮಂತ್ರಿಗಳು ಆಗಮಿಸಲು ಗುರುತಿಸಿದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೆಲಿಪ್ಯಾಡ್ ಸ್ಥಳಕ್ಕೆ ಸಹ ಭೇಟಿ ನೀಡಿ, ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಿ ಸುರಕ್ಷತೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.ಇದೆ ವೇಳೆ ಜಿಲ್ಲಾಧಿಕಾರಿಗಳು, ಬ್ರಹ್ಮಲೀನರಾದ ಪರಮಪೂಜ್ಯ ಶ್ರೀಸಿದ್ದರಾಮನಂದಪುರಿ ಸ್ವಾಮೀಜಿಯವರ ದರ್ಶನ ಪಡೆದುಕೊಂಡರು.

Leave a Reply

Your email address will not be published. Required fields are marked *