ರಾಯಚೂರು ಜನವರಿ 26 (ಕ‌ವಾ): ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಸುಧಾರಿಸುವ ಪ್ರಯತ್ನದ ಭಾಗವಾಗಿ ಕರ‍್ಯಕ್ರ‌ಮ ರೂಪಿಸಲು ಎನ್ ಜಿಓ ಜೊತೆಗೆ ರ‍್ಚಿಸಿ ಕರ‍್ಯಯೋಜನೆ ರೂಪಿಸುವ ಚಿಂತನೆಯಿದೆ ಎಂದು ರ‍್ನಾಟಕ ರ‍್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರಂದು ಜಿಲ್ಲಾಡಳಿತದಿಂದ ನಡೆದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಕೇರಳ ಮತ್ತು ರ‍್ನಾಟಕ ಹೊರತುಪಡಿಸಿ ದೇಶದ ಎಲ್ಲ ರಾಜ್ಯಗಳಿಗೂ ಎಮ್ಸ್ ನೀಡಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆದು ರ‍್ನಾಟಕದ ರಾಯಚೂರಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಡ ಹಾಕುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.
ರಾಯಚೂರು ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂಬ ವರದಿಗಳಿವೆ. ಇದನ್ನು ಹೋಗಲಾಡಿಸಲು ಆರೋಗ್ಯ ಇಲಾಖೆಯಿಂದ ಈಗಾಗಲೇ ಅಗತ್ಯ ಕ್ರಮವಹಿಸಲಾಗಿದೆ. ಈ ದಿಶೆಯಲ್ಲಿ ಜಿಲ್ಲೆಯ ಜನರ ಒತ್ತಾಸೆಯಂತೆ ಜಿಲ್ಲೆಯಲ್ಲಿ
ಮಕ್ಕಳ ಆಸ್ಪತ್ರೆಯ ಸ್ಥಾಪನೆಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ರ‍್ಚಿಸುವುದಾಗಿ ಸಚಿವರು ತಿಳಿಸಿದರು.
ರಸ್ತೆ, ಬೀದಿ ದೀಪ ಸೇರಿದಂತೆ ಮೂಲಭೂತ ಸೌರ‍್ಯ ಕಲ್ಪಿಸಲು ರಾಯಚೂರು ಜಿಲ್ಲೆಗೆ 200 ಕೋಟಿ ರೂ ಬಿಡುಗಡೆಯಾಗಿದೆ. ರಸ್ತೆ ದುರಸ್ತಿ ಸೇರಿದಂತೆ ಮೂಲಭೂತ ಸೌರ‍್ಯ ಕಲ್ಪಿಸುವ ಕರ‍್ಯಗಳು ನಿರಂತರ ನಡೆಯಲಿವೆ ಎಂದು ಸಚಿವರು ತಿಳಿಸಿದರು.
ಪತ್ರರ‍್ತರ ಅಪೇಕ್ಷೆಯಂತೆ ಸಹ ಫೆ.5ರಿಂದ ಮೂರು ದಿನಗಳ‌ ಕಾಲ ರಾಯಚೂರು ಜಿಲ್ಲಾ ಉತ್ಸವ ನಿಗದಿ ಮಾಡಲಾಗಿದೆ. ಇದಕ್ಕೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಸಚಿವರು ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.
ರಾಯಚೂರು ಉತ್ಸವಕ್ಕು ಮೊದಲು ರಾಯಚೂರು ನಗರದಲ್ಲಿನ ಎಲ್ಲ ರಸ್ತೆಗಳಲ್ಲಿನ ತಗ್ಗು ಗುಂಡಿ ಮುಚ್ಚಿ ಸರಿಪಡಿಸಬೇಕು ಎಂದು ಮಹಾನಗರ ಪಾಲಿಕೆಗೆ ಸೂಚನೆ ನೀಡಿದ್ದಾಗಿ ಸಚಿವರು ಹೇಳಿದರು.
ರಾಯಚೂರು ಜಿಲ್ಲೆಯಲ್ಲಿ ಅನುವಿದ್ಯುತ್ ಸ್ಥಾವರ ಘಟಕದ ಸ್ಥಾಪನೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ನರ‍್ದಾಕ್ಷಿಣ್ಯ ಕ್ರಮ ವಹಿಸಿ ಅಕ್ರಮ ಮರಳು ಸಾಗಣೆ, ಇಸ್ಪಿಟ್, ಜೂಜು ದಂಧೆಗಳನ್ನು ನಿಗ್ರಹಿಸಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪರ‍್ಣ ಸ್ವಾತಂತ್ರ‍್ಯ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಬಸನಗೌಡ ದದ್ದಲ್, ಎ ವಸಂತಕುಮಾರ, ಎಪಿಎಂಸಿ ಅಧ್ಯಕ್ಷರಾದ ಮಲ್ಲಿಕರ‍್ಜುನ ಗೌಡ, ಉಪಾಧ್ಯಕ್ಷರಾದ ಬಸೀರ್ ಅಹ್ಮದ್, ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರಾದ ಪವನ ಕಿಶೋರ ಪಾಟೀಲ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಪಂ ಸಿಇಓ ಈಶ್ವರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಝೋನಲ್ ಆಯುಕ್ತರಾದ ಪುರುರಾಜ ಸಿಂಗ್, ರಾಜ್ಯ ನೀತಿ ಆಯೋಗದ ಸದಸ್ಯರಾದ ಡಾ.ರಝಾಕ್ ಉಸ್ತಾದ್ ಇದ್ದರು.

Leave a Reply

Your email address will not be published. Required fields are marked *