ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ಇಲ್ಲಿನ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಣ್ಣ ಸಜ್ಜನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ನಸೀರ್ ಅಹ್ಮದ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ, ಜಿಲ್ಲಾ ಖಜಾನೆ ಅಧಿಕಾರಿ ಸಿದ್ದಾರಾಮೇಶ್ವ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಮನೋಹರ ಕೃಷ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದ್ದೀಶ್, ಶಿರಸ್ತೇದಾರ ಸೂಗುರೇಶ ದೇಸಾಯಿ, ಸಿಬ್ಬಂದಿ ಮಲ್ಲೇಶ, ವೇಣುಮಾಧವ್, ಪ್ರಕಾಶ್, ಅನೀಲ್ ಕುಲಕರ್ಣಿ ಸೇರಿದಂತೆ ಇತರರು ಇದ್ದರು.


