ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ರಾಯಚೂರಿನ ಜಿಲ್ಲಾಧಿಕಾರಿಗಳ ಗೃಹ ಕಚೇರಿಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ, ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ನಿಯಾಜ್, ಎನ್.ವಿ.ಡಿ. ಸ್ಪರ್ಧಾ ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ.ದಂಡಪ್ಪ ಬಿರಾದಾರ, ಸಿ.ಆರ್.ಪಿ ರಾವುತರಾವ್ ಬರೂರ, ಕೆ.ಇ.ಬಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಹಿರಲಾಲ್, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ ಮತ್ತು ಕೆ.ಇ.ಬಿ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *