ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಆಚರಿಸಲಾಯಿತು.
ಸಂಘದ ಅಧ್ಯಕ್ಷರಾದ ಪತಂಗೆ ಜಯವಂತರಾವ್ ಅವರು ಸಂಘದ ಆಡಳಿತ ಕಚೇರಿಯಲ್ಲಿ ಮತ್ತು ಉಪಾಧ್ಯಕ್ಷರಾದ ಶಶಿಧರ ಪಾಟೀಲ್ ಅವರು ಗಂಜ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪತಂಗೆ ಜಯವಂತರಾವ್ ಅವರು ಮಾತನಾಡಿ, ಭಾರತವು ಸಾರ್ವಭೌಮ ಮತ್ತು ಪ್ರಜಾಪ್ರಭುತ್ವ ರಾಷ್ಟçವಾಗಿದೆ. ಸಂವಿಧಾನದ ರಚನೆಗೆ ಕೊಡುಗೆ ನೀಡಿದ ಪ್ರತಿಯೊಬ್ಬ ಮಹನಿಯರನ್ನು ಸ್ಮರಿಸುವ ದಿನ ಇದಾಗಿದೆ. ಸಂವಿಧಾನ ಕೇವಲ ದಾಖಲೆಯಲ್ಲ; ಇದು ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಾಗಿದೆ. ಎಲ್ಲರಿಗೂ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ‍್ಯವನ್ನು ಖಾತ್ರಿಪಡಿಸುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದು ಮಾತ್ರವಲ್ಲದೆ ಸಾಮಾಜಿಕ ಸಾಮರಸ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಬೆಳೆಯುತ್ತಿರುವ ಭಾರತಕ್ಕಾಗಿ ಕೆಲಸ ಮಾಡಲು ನಾವು ಇಂದು ಪ್ರತಿಜ್ಞೆ ಮಾಡೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ಬಂದಯ್ಯ ಸ್ವಾಮಿ, ವ್ಯವಸ್ಥಾಪಕರಾದ ನರಸಿಂಹಪ್ಪ, ಲೇಖಪಾಲಕರಾದ ನರಸಿಂಹಪ್ಪ, ಎಂ.ಮಲ್ಲಿಕಾರ್ಜುನ, ರೇಖಮ್ಮ, ಎಂ.ನಾಗರಾಜ್ ಮತ್ತು ಇನ್ನೀತರರು ಉಪಸ್ಥಿತರಿದ್ದರು.

