ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ನಿಮಿತ್ತ ಜಿಲ್ಲಾಡಳಿತದಿಂದ ಜನವರಿ 27ರ ಬೆಳಗ್ಗೆ 6 ಗಂಟೆಗೆ ಸೈಕಲ್ ಮ್ಯಾರಾಥಾನ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ.
ಈ ಸೈಕಲ್ ಮ್ಯಾರಾಥಾನ್ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾಗಿ ಬಸವೇಶ್ವರ ಸರ್ಕಲ್, ಲಿಂಗಸುಗೂರು ರೋಡ್, ಯಕ್ಲಾಸಪುರ್, ಯರಮರಸ್, ಬೈಪಾಸ್, ಓಪೆಕ್ ಆಸ್ಪತ್ರೆ, ಗಂಜ್ ಸರ್ಕಲ್, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪುವುದು.
ಈ ಸ್ಪರ್ಧೆಯಲ್ಲಿ ವಿಜೇತರಾಗುವ ಸ್ಪರ್ಧಾಳುಗಳಿಗೆ ಪ್ರಥಮ ಬಹುಮಾನ 10 ಸಾವಿರ ರೂ. ಹಾಗೂ ದ್ವಿತೀಯ ಬಹುಮಾನ 5 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

