ಸಿಂಧನೂರು: ಸಿಂಧನೂರಿನ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಗೌರವ ಮತ್ತು ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಈ ಮಹತ್ವದ ದಿನದ ಅಂಗವಾಗಿ ಆಯೋಜಿಸಲಾದ ಧ್ವಜಾರೋಹಣ ಕಾರ್ಯಕ್ರಮವನ್ನು ಸನ್ ರೈಸ್ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಖಾಜಾ ಮೋಹಿನುದ್ದೀನ್ ಅವರು ನೆರವೇರಿಸಿದರು.ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆಯನ್ನು ಗೌರವಪೂರ್ವಕವಾಗಿ ಹಾಡಲಾಯಿತು. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಮತ್ತು ಸಂವಿಧಾನದ ಮಹತ್ವವನ್ನು ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಸನ್ ರೈಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಇರ್ಷಾದ್ ಕೆ, ನರ್ಸಿಂಗ್ ಕಾಲೇಜಿನ ಪ್ರಾಚಾರ್ಯರಾದ ಸಿರಿಲ್, ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಚಕ್ರವರ್ತಿ, ವಿವಿಧ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯರು ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿ, “ಭಾರತದ ಸಂವಿಧಾನವು ನಮ್ಮ ದೇಶದ ಶಕ್ತಿ, ಏಕತೆ ಹಾಗೂ ಸಮಾನತೆಯ ಆಧಾರಸ್ತಂಭವಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು” ಎಂದು ಕರೆ ನೀಡಿದರು. ಅದೇ ರೀತಿ ಇಸಾಕ್ ಅವರು ಗಣರಾಜ್ಯೋತ್ಸವದ ಕುರಿತು ಮಾತನಾಡಿ, ದೇಶದ ಏಕತೆ, ಅಖಂಡತೆ ಹಾಗೂ ದೇಶಾಭಿಮಾನವನ್ನು ಯುವಜನತೆ ತಮ್ಮ ಜೀವನದ ಧ್ಯೇಯವನ್ನಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಹಾಗೂ ಆಶುಪಾಶ ಅವರು ಗಣರಾಜ್ಯೋತ್ಸವದ ಕುರಿತು ಮಾತನಾಡಿದರು
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿ ಸಮಾರಂಭಕ್ಕೆ ಉತ್ಸಾಹ ತುಂಬಿದರು. ತ್ರಿವರ್ಣ ಧ್ವಜದ ಮುಂದೆ ವಿದ್ಯಾರ್ಥಿಗಳಲ್ಲಿ ಕಂಡುಬಂದ ದೇಶಪ್ರೇಮ ಮತ್ತು ಶಿಸ್ತು ಎಲ್ಲರ ಗಮನ ಸೆಳೆಯಿತು.ಒಟ್ಟಾರೆ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ದೇಶಭಕ್ತಿ, ಸಂವಿಧಾನ ಗೌರವ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರುತ್ತಾ ಅತ್ಯಂತ ಯಶಸ್ವಿಯಾಗಿ ನಡೆಯಿತು.

Leave a Reply

Your email address will not be published. Required fields are marked *