ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿನ ರಾಂಪ್ ಯೋಜನೆಯಡಿಯಲ್ಲಿ ಪಿರಿಯಾಡಿಕ್ ಮೀಟ್ಸ್ ಅಂಡ್ ನಾಲೆಜ್ ಟ್ರಾನ್ಸ್ಫರ್ ಸೆಷನ್ಸ್ ವಿಥ್ ಬಿಡಿಎಸ್‌ಪಿ ಯೋಜನೆಯ ಕುರಿತು ಕೆಎಸ್‌ಎಮ್‌ಸಿ& ಎ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವು ಜನವರಿ 29ರ ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಮಾನ್ವಿಯ ಎಪಿಎಂಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾನವಿ ತಾಲ್ಲೂಕು ಹಾಗೂ ಸುತ್ತಲಿನ ಕೈಗಾರಿಕಾ ಘಟಕಗಳ ಮುಖ್ಯಸ್ಥರು, ಉದ್ದಿಮೆದಾರರು ಈ ಕಾರ್ಯಾಗಾರದಲ್ಲಿ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರಾದ ಲಕ್ಷ್ಮೀಕಾಂತ ಕುಲಕರ್ಣಿ ಅವರು ಮೊಬೈಲ್ ಸಂಖ್ಯೆ: 8861241093ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
