ತಾಲೂಕಿನ ಇಜೆ ಹೊಸಳ್ಳಿ ಕ್ಯಾಂಪ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜರುಗಿತು.13 ಶಾಲೆಗಳ 300 ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಧ್ಯಕ್ಷತೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಕಾಶ ವಹಿಸಿದ್ದರು. ಗ್ರಾಂ. ಪಂ.ಅಧ್ಯಕ್ಷೆ ರೇಣುಕಮ್ಮ ಹುಸೇನಪ್ಪ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಲಯ ಮಟ್ಟದ ಸಂಪನ್ಮೂಲ ಅಧಿಕಾರಿಗಳಾದ ಬಸವರಾಜ ಅಂಗಡಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಮಕ್ಕಳು ತಮ್ಮ ಪಠ್ಯ ಪುಸ್ತಕಗಳನ್ನು ಓದುವುದರ ಜೊತೆಗೆ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಹಾಗೂ ಅಧ್ಯಾತ್ಮಿಕ ಚಿಂತನೆಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಇಂತಹ ವೇದಿಕೆಗಳು ಮಕ್ಕಳಿಗೆ ಬಹಳ ಅವಶ್ಯಕತೆ ಇದೆ. ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಇದನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪ್ರತಿಭಾ ಕಾರಂಜಿ ವೇದಿಕೆಗಳಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರಿಂದ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ ಹಾಗೂ ಆದರ್ಶ ಪುರುಷರ ಜೀವನ ಚರಿತ್ರೆಯ ಸಾರವನ್ನು ತಿಳದುಕೊಂಡು ಉತ್ತಮ ಸಮಾಜ ಕಟ್ಟಲು ಇಂತಹ ವೇದಿಕೆಗಳು ಬಹಳ ಉಪಯೋಗವಾಗುತ್ತವೆ ಎಂದು ಮುಖ್ಯಗುರು ವೀಣಾಬಾಯಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಪಿಡಿಒ ನಾಗೇಂದ್ರ, ಶಿಕ್ಷಕ ಛತ್ರಪ್ಪ ಸ್ವಾಗತ ಕೋರಿದರು. ಆಶಾ ಎಸ್.ಕೆ.ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸನ್ಮಾನವನ್ನು ಚಂದ್ರವತಿ ಮತ್ತು ವಿಜಯಲಕ್ಷ್ಮಿ ನಡೆಸಿಕೊಟ್ಟರು.
ಈ ಸಂಧರ್ಭದಲ್ಲಿ: ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಗ್ರಾಮದ ಮುಖಂಡರು, ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಇಜೆ ಹೊಸಳ್ಳಿ ವಲಯ ಮಟ್ಟದ ಎಲ್ಲಾ ಶಾಲೆಯ ಮುಖ್ಯಗುರುಗಳು, ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ಸಹ ಶಿಕ್ಷಕರು ಭಾಗವಹಿಸಿದ್ದರು.

