ತಾಳಿಕೋಟಿ: ತಾಲೂಕಿನ ಬಳಗನೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಮಡಿವಾಳಮ್ಮ ಎಸ್ ಜಿ(ನಾಡಗೌಡ) ಇವರು ರಾಜ್ಯ ಉತಮ ಶಿಕ್ಷಕಿ ಪ್ರಶಸ್ತಿಗೆ ಪುರಸ್ಕೃತರಾದ ಹಿನ್ನೆಲೆಯಲ್ಲಿ ಅವರನ್ನು 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಮಯದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡ, ತಹಸಿಲ್ದಾರ್ ಡಾ.ವಿನಯಾ ಹೂಗಾರ,ತಾಪಂ ಇಓ ಅನಸೂಯಾ ಚಲವಾದಿ,ಸಿಡಿಪಿಓ ಶಿವಮೂರ್ತಿ ಕುಂಬಾರ,ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್ಐ ಜ್ಯೋತಿ ಖೋತ್, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸಂಗಮೇಶ ದೇಸಾಯಿ, ನಿವೃತ್ತ ಶಿಕ್ಷಕ ಶಿವಣ್ಣ ಕಡಕೋಳ ಮತ್ತಿತರರು ಇದ್ದರು.

