ಮಾನ್ವಿ: ಪಟ್ಟಣದ ಆರ್.ಜಿ.ಕ್ಯಾಂಪ್ ರಸ್ತೆಯಲ್ಲಿ ಬರುವ ಶಿರಡಿ ಸಾಯಿಬಾಬಾ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿನ ಕೃಷಿ ಜಮೀನಿನಲ್ಲಿ ರೈತರು ವಿವಿಧ ಬೆಳೆಗಳಿಗೆ ಸಿಂಪರಣೆ ಮಾಡಿದ ಕೀಟನಾಶಕದ ಅಂಶಗಳು ಶುಕ್ರವಾರ ಈ ಭಾಗದ ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆ, ಶ್ರೀ .ವೆಂಕಟೇಶ್ವರ ಶಿಕ್ಷಣ ಸಂಸ್ಥೆ, ಆರ್.ವಿ.ಎಸ್.ಬ್ಲೋಸಂ ಶಿಕ್ಷಣ ಸಂಸ್ಥೆಯಲ್ಲಿ ಅಭ್ಯಾಸ ಮಾಡುತ್ತಿರುವ ಕೇಲವು ವಿದ್ಯಾರ್ಥಿಗಳಲ್ಲಿ ಗಂಟಲು ಉರಿ ಹಾಗೂ ವಾಂತಿಯAತಹ ಲಕ್ಷಣಗಳು ಕಂಡು ಬಂದಿದ್ದರಿAದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಶಾಲೆಗೆ ರಜೆ ಘೋಷಣೆ ಮಾಡಿದ್ದರು ಈ ಹಿನ್ನೆಲೆಯಲ್ಲಿ ಶನಿವಾರ ತಾ.ಆರೋಗ್ಯಧಿಕಾರಿ ಡಾ.ಶರಣಬಸವರಾಜ, ಪುರಸಭೆ ಆರೋಗ್ಯ ನಿರೀಕ್ಷಕರಾದ ಮಹೇಶಕುಮಾರ, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯವರು ತಹಸೀಲ್ದಾರ್ ಭಿಮರಾಯ ಬಿ.ರಾಮಸಮುದ್ರ ಭೇಟಿ ನೀಡಿ ಪರಿಶೀಲಿಸಿದರು.
ನಂತರ ತಹಸೀಲ್ದಾರ್ ಭಿಮರಾಯ ಬಿ.ರಾಮಸಮುದ್ರ ಮಾತನಾಡಿ ರಾಸಾಯನಿಕ ಪ್ರಭಾವದಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪ್ರಭಾವ ವಾಗಿತ್ತು ಅದ್ದರೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ರಾಸಾಯನಿಕ ಅಂಶ ಇಂದು ಕಂಡು ಬಂದಿಲ್ಲ ಎಂದು ತಿಳಿಸಿರುವುದರಿಂದ ಈ ಮೂರು ಶಾಲೆಗಳಿಗೆ ಮಕ್ಕಳ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದೆ ಹಾಗೂ ಪಕ್ಕದಲ್ಲಿನ ಬಾಲಕಿಯರ ವಸತಿ ನೀಲಯದಲ್ಲಿನ ಮಕ್ಕಳ ಆರೋಗ್ಯದ ಬಗ್ಗೆ ಕೂಡ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾನ್ವಿ: ಪಟ್ಟಣದ ಶಿರಡಿ ಸಾಯಿಬಾಬಾ ದೇವಸ್ಥಾನದ ಸುತ್ತ ಮುತ್ತಲಿನ ಶಾಲೆಗಳಲ್ಲಿ ರಾಸಾಯನಿಕ ಪ್ರಭಾವ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಹಸೀಲ್ದಾರ್ ಭಿಮರಾಯ ಬಿ.ರಾಮಸಮುದ್ರ ಭೇಟಿ ನೀಡಿ ಪರಿಶೀಲಿಸಿದರು.

Leave a Reply

Your email address will not be published. Required fields are marked *