ಲಿಂಗಸಗೂರು: ಜ 29 .ಅಂಗನವಾಡಿ ನೌಕರರು ಹಾಗೂ ಸಹಾಯಕಿಯರ ದೀರ್ಘಕಾಲೀನ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ತಾಲ್ಲೂಕು ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಡಿಪಿಓ ನಾಗರತ್ನಾ ಎನ್. ಅವರಿಗೆ ಮನವಿ ಸಲ್ಲಿಸಿದರು

2023ರಿಂದ ಬಾಕಿ ಇರುವ ವೇತನ, ಭತ್ಯೆ ಹಾಗೂ ಇತರೆ ಸೌಲಭ್ಯಗಳನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಯಿತು.
‎2024–25ನೇ ಸಾಲಿನಲ್ಲಿ ನಿವೃತ್ತರಾದ ಅಂಗನವಾಡಿ ನೌಕರರಿಗೆ ಎನ್‌ಪಿಎಸ್ ಹಣ, ಗ್ರ್ಯಾಚ್ಯುಟಿ, ಬಾಕಿ ವೇತನ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ವಿಳಂಬವಿಲ್ಲದೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯ, ಕಟ್ಟಡಗಳ ದುರಸ್ತಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಲಾಯಿತು.
‎‎ಅಂಗನವಾಡಿ ನೌಕರರು ಮತ್ತು ಸಹಾಯಕಿಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಭದ್ರತೆ, ನಿವೃತ್ತಿ ವಯಸ್ಸು ಹೆಚ್ಚಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳು ಪ್ರತಿಭಟನೆಯಲ್ಲಿ ಪ್ರತಿಧ್ವನಿಸಿವೆ. ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಆಗುತ್ತಿರುವ ಲೋಪದೋಷಗಳನ್ನು ತಕ್ಷಣ ಸರಿಪಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಯಿತು.
ಈ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗದಿದ್ದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಸಂಘದ ಮುಖಂಡರು ನೀಡಿದರು.
‎‎ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ ರಮೇಶ ವೀರಾಪೂರು, ಅಂಗನವಾಡಿ ಸಂಘದ ಅಧ್ಯಕ್ಷೆ ಸರಸ್ವತಿ, ಕಾರ್ಯದರ್ಶಿ ಮಹೇಶ್ವರಿ, ಮುಖಂಡರಾದ ಲಕ್ಷ್ಮೀ ನಗರೂರು, ಮುಖಂಡರಾದ ಮಲ್ಲನಗೌಡ ಸುಜಾತಾ, ಸುಮಿತ್ರಾ, ನೀಲಮ್ಮ, ಜಲಜಾಕ್ಷಿ, ಶಶಿಕಲಾ, ಸೇರಿದಂತೆ ಅನೇಕ ಅಂಗನವಾಡಿ ನೌಕರರು ಮತ್ತು ಸಹಾಯಕಿಯರು ಇದ್ದರು.

Leave a Reply

Your email address will not be published. Required fields are marked *