ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರಾಣಿದಯಾ ಸಂಘ,ಕೃ.ವಿ.ವಿ, ಪಶುಪಾಲನಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನಲ್ಲಿ ಫೆ.06ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ಆವರಣದಲ್ಲಿ ಶ್ವಾನಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ನಾಗರಿಕರು ಹಾಗೂ ಶ್ವಾನ ಪ್ರಿಯರು ಭಾಗವಹಿಸುವಂತೆ ಕೋರಲಾಗಿದೆ.
ಈ ಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲಾ ಶ್ವಾನಗಳಿಗೆ ಉಚಿತವಾಗಿ ರೇಬೀಸ್ ಲಸಿಕೆಯನ್ನು ಹಾಕಲಾಗುವುದು ಎಂದು ಪಶುಪಾಲನಾ ಇಲಾಖೆ ಇಲಾಖೆಯ ಉಪನಿರ್ದೆಶಕರಾದ ಡಾ.ಪೋಮಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *