ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಇಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿನ ರಾಂಪ್ ಯೋಜನೆಯಡಿಯಲ್ಲಿ ZED & LEAN under RAMP ಯೋಜನೆ ಕುರಿತು ಕೆಎಸ್‌ಎಮ್‌ಸಿಎ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಸಿಂಧನೂರಿನ ವಿನಯ್ ರೆಸಿಡೆನ್ಸಿ ಹೋಟೆಲ್‌ನಲ್ಲಿ ಜನವರಿ 31ರ ಬೆಳಿಗ್ಗೆ 10.30ಕ್ಕೆ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಿಂಧನೂರು, ಮಸ್ಕಿ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಕೈಗಾರಿಕಾ ಘಟಕಗಳ ಮುಖ್ಯಸ್ಥರು, ಉದ್ದಿಮೆದಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಲಕ್ಷ್ಮೀಕಾಂತ್ ಕುಲಕರ್ಣಿ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 8861241093ಗೆ ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
