ಸಿಂಧನೂರು : ತಾಲ್ಲೂಕಿನ ಈರಣ್ಣ ಕ್ಯಾಂಪ್ ಸರ್ಕಾರಿ ಪ್ರಾಥಮಿಕ ಶಾಲೆ ಯಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ದಿನಾಂಕ 29-01-2026 ರಂದು ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಹಮತ್ ಪಾಷ ಅವರು,
ಗ್ರಾಮ ಪಂಚಾಯತ್ ಅಧ್ಯಕ್ಷರು, ಆರ್.ಎಚ್. ನಂಬರ್–1, ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರು ವಹಿಸಿದ್ದರು.
ಉದ್ಘಾಟನಾ ಭಾಷಣದಲ್ಲಿ ಶ್ರೀ ರಹಮತ್ ಪಾಷ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ,
“ಶಿಸ್ತು ಮತ್ತು ಸಂಸ್ಕಾರವುಳ್ಳ ವಿದ್ಯಾವಂತರಾಗಿರಿ ಅಧ್ಯಕ್ಷ ರಹಮತ್ ಪಾಷ ಕಲಿಕಾ ಹಬ್ಬದಲ್ಲಿ ನಿಮ್ಮೆಲ್ಲರ ಉತ್ಸವಮಯ ಕಲಿಕಾ ಅನುಭವವನ್ನು ನೋಡುತ್ತಿದ್ದರೆ ನನಗೆ ಅಪಾರ ಸಂತೋಷವಾಗುತ್ತಿದೆ. ನಾವು ಓದುವ ಸಂದರ್ಭದಲ್ಲಿ ಈ ರೀತಿಯ ಚಟುವಟಿಕೆಗಳು ಬಹಳ ಕಡಿಮೆ ಇದ್ದವು. ಸರ್ಕಾರವು ನಿಮಗೆ ಒದಗಿಸುವ ಎಲ್ಲಾ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ನಿಷ್ಠಾವಂತ, ವಿದ್ಯಾವಂತ ನಾಗರಿಕರಾಗಿರಿ ಹಾಗೂ ಒಳ್ಳೆಯ ಭವಿಷ್ಯವನ್ನು ರೂಪಿಸಿಕೊಳ್ಳಿ” ಎಂದು ಸಲಹೆ ನೀಡಿದರು.
ಕಲಿಕಾ ಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸೃಜನಾತ್ಮಕ ಹಾಗೂ ಶೈಕ್ಷಣಿಕ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಈ ಕಾರ್ಯಕ್ರಮವು ಮಕ್ಕಳಲ್ಲಿ ಕಲಿಕೆಯ ಮೇಲಿನ ಆಸಕ್ತಿ, ಆತ್ಮವಿಶ್ವಾಸ ಹಾಗೂ ಉತ್ಸಾಹವನ್ನು ಹೆಚ್ಚಿಸಿತು.
ಕಾರ್ಯಕ್ರಮದಲ್ಲಿ ಶಿಕ್ಷಕರು, ಪಾಲಕರು, SDMC ಸದಸ್ಯರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಲಿಕಾ ಹಬ್ಬ ಕಾರ್ಯಕ್ರಮವು ಸೌಹಾರ್ದತೆಯೊಂದಿಗೆ ಯಶಸ್ವಿಯಾಗಿ ಮುಕ್ತಾಯವಾಯಿತು.


