ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿರುವ ಎಂಎಸ್‌ಪಿಎಲ್‌ ಕಾರ್ಖಾನೆ ವತಿಯಿಂದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಕಾರ್ಖಾನೆಯ ಸಿ.ಎಸ್.ಆರ್ ನಿಧಿಯಿಂದ ಸರ್ಕಾರಿ ಶಾಲೆಗೆ ಎರಡು ನೂತನ ಕೊಠಡಿಗಳನ್ನು ನಿರ್ಮಿಸಿ ಶಾಲೆಗೆ ಹಸ್ತಾಂತರಿಸಿದೆ.ನಿರ್ಮಾಣಗೊಂಡ ನೂತನ ಕೊಠಡಿಗಳ ಲೋಕಾರ್ಪಣೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಗ್ರಾಮಸ್ಥರು ಹಾಗೂ ಕಾರ್ಖಾನೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಈ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಎಂಎಸ್‌ಪಿಎಲ್‌ ಸಂಸ್ಥೆ ತಿಳಿಸಿದೆ. ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದ್ದ ಶಾಲೆಗೆ ಈ ನೂತನ ಕೊಠಡಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಗ್ರಾಮೀಣ ಶಿಕ್ಷಣದ ಅಭಿವೃದ್ಧಿಗೆ ಕೈಜೋಡಿಸಿರುವ ಎಂಎಸ್‌ಪಿಎಲ್‌ ಕಾರ್ಖಾನೆಯ ಸಾಮಾಜಿಕ ಹೊಣೆಗಾರಿಕೆಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *