ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಭಾಗವಾದ ಜಿಲ್ಲಾ ಜನಜಾಗೃತಿ ವೇದಿಕೆಯ ಅಡಿಯಲ್ಲಿ ನಡೆದ ಮಧ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ನವಜೀವನ ಸಮಿತಿ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ, ನವಜೀವನ ಸ್ವಸಹಾಯ ಸಂಘ, ಗಾಂಧಿ ಜಯಂತಿ ಕಾರ್ಯಕ್ರಮದಂತಹ ಅನೇಕ ಕಾರ್ಯಕ್ರಮಗಳು ಜನರ ಮೆಚ್ಚುಗೆ ಗಳಿಸಿವೆ.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಳ್ಳಾರಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ.ಭಾಸ್ಕರ್ ಇವರ ನೇತೃತ್ವದಲ್ಲಿ ಹೆಚ್ಚಿನ ಸೇವಾ ಕಾರ್ಯಗಳನ್ನು ಮಾಡಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಲಿ ಎಂದು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ವೆಂಕನಗೌಡ ಪಾಟೀಲ್ ವಟಗಲ್, ಬೀರಪ್ಪ ಶಂಭೋಜಿ, ಡಾ.ಶರಣಪ್ಪ ಗೊರೇಬಾಳ, ಮರಿಬಸವರಾಜ ಬೊಮ್ಮನಾಳ, ಲಕ್ಷ್ಮೀದೇವಿ ಕಟ್ಟೆಪ್ಪ ಗುಂಜಳ್ಳಿ, ಹಾಗೂ ಶಂಕ್ರಪ್ಪ ವಜ್ರಬಂಡಿ, ಸೇರಿದಂತೆ ಅನೇಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *