ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ತಾಲೂಕಿನ ಯರಮರಸಿನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆಂದು ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಈರಣ್ಣ ಗೋಸಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ 2025-26ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು ಇದ್ದು, ಅರ್ಜಿಯನ್ನು ಫೆ.25ರೊಳಗಾಗಿ ಅಧಿಕೃತ ವೆಬ್‌ಸೈಟ್ ವಿಳಾಸ: www.schooleducation.karnataka.gov.in ಅಥವಾ www.vidyavahini.karnataka.gov.in ನಲ್ಲಿಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಅವಕಾಶವನ್ನು ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಹಾಯವಾಣಿ ಸಂಖ್ಯೆ: 9481087977ಗೆ ಸಂಪರ್ಕ ಮಾಡಬಹುದಾಗಿದೆ ರಾಯಚೂರಿನ ಕ್ಷೇತ್ರಾ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *