ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉತ್ಸವ-2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್, ಡಿಡಿಯು-ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದದಲ್ಲಿ ಒಂದು ದಿನದ ಉದ್ಯೋಗ ಮೇಳವನ್ನು ಫೆ.06ರಂದು ನಗರದ ಕೃಷಿ ವಿವಿಯ ಆವರಣದಲ್ಲಿ ಆಯೋಜಿಸಲಾಗಿದೆ. ಈ ಮೇಳದ ಯಶಸ್ವಿಗಾಗಿ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕೆಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಹೇಳಿದರು.
ಜನವರಿ 30ರ ಶುಕ್ರವಾರ ದಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇಳಯುವ ಅಂದು ಬೆಳಿಗ್ಗೆ 9 ಗಂಟೆಗೆ ಚಾಲನೆ ದೊರೆಯಲಿದೆ. ವೇದಿಕೆಯ ಸುತ್ತಲೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳಬೇಕು. ಮೇಳದಲ್ಲಿ ಎಸ್‌ಎಸ್‌ಎಲ್‌ಸಿಯಿಂದ ಮೊದಲುಗೊಂಡು ಪಿಯುಸಿ, ಸಾಮಾನ್ಯ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವಿವಿಧ ಅರೆ ವೈದ್ಯಕೀಯ ಕೋರ್ಸ್ಗಳನ್ನು ಕಲಿತವರಿಗೆ ಉದ್ಯೋಗಾವಕಾಶ ಕಲ್ಪಿಸಲು ವೇದಿಕೆ ಸಜ್ಜುಗೊಳಿಸಲಾಗಿದೆ. ಸಾವಿರಾರೂ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೇಳದಲ್ಲಿ ನೂರಾರು ಉದ್ಯೋಗದಾತರು (ಕಂಪೆನಿಗಳು) ಭಾಗವಹಿಸಲಿದ್ದು, ಈಗಾಗಲೇ ನೋಂದಣಿ ಮಾಡಿಸಿದ್ದಾರೆ. ಅವರ ಸಂಖ್ಯೆ ಇನ್ನೂ ಹೆಚ್ಚಳವಾಗಬಹುದು ಎಂದರು.
ಜನವರಿ 30ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ 4,967 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ನೋಂದಣೆ ಪ್ರಕ್ರಿಯೆ ಹೆಚ್ಚಳವಾಗಲಿದೆ. ಮೇಳದಲ್ಲಿ ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ಆಫರ್ ಲೆಟರ್ ಕೊಡಲಿದ್ದಾರೆ ಎಂದರು.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಜಾಲತಾಣ hhttps://udyogamela.ksdckarnataka.com ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿಕೊAಡು ಭಾಗವಹಿಸಬಹುದಾಗಿರುತ್ತದೆ. ಹಾಗೂ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗದಾತರು/ಕಂಪನಿಗಳು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರಗಳೊಂದಿಗೆ hhttps://employer.ksdckarnataka.com/login ಈ ಜಾಲತಾಣದಲ್ಲಿ ನೋಂದಾಯಿಸಿಕೊAಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕರಾದ ರಾಜಕುಮಾರ್ ಪಾಟೀಲ್, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವ್ಯವಸ್ಥಾಪಕರಾದ ಸಂತೋಷ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಕಾರ್ಯದರ್ಶಿ ಜಂಬಣ್ಣ, ಎಸ್.ಬಿ.ಐ ಆರ್‌ಸೇಟ್ ನಿರ್ದೇಶಕರಾದ ವಿಜಯಕುಮಾರ್, ಜಿಲ್ಲೆಯ ವಿವಿಧ ಐಟಿಐ ಕಾಲೇಜ್ ಮುಖ್ಯಸ್ಥರಾದ ಶಿವರಾಜ ಕುಮಾರ್, ರುದ್ರಗೌಡ, ಹೈದರಾಸಾಬ್, ತೋಮಸಪ್ಪ, ರಾಮಣ್ಣ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *