ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಫೆ.01ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರೊಂದಿಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಹೊರಟು ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್‌ನ ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಿಂದ ಆಯೋಜಿಸಿರುವ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀಸಿದ್ದರಾಮನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ ಕಾರ್ಯಕ್ರಮ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ತಿಂಥಣಿ ಬ್ರಿಜ್‌ನ ಶಾಖಾ ಮಠದಿಂದ ನಿರ್ಗಮಿಸಿ ಮುಖ್ಯಮಂತ್ರಿಗಳೊಂದಿಗೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *