ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ 2026ರ ಫೆಬ್ರವರಿ 05, 06 ಮತ್ತು 07 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಜ್ಯೋತಿ ರಥಯಾತ್ರೆಯು ಸಿದ್ಧವಾಗಿದೆ.
ಈ ಜ್ಯೋತಿ ರಥಯಾತ್ರೆಯು ಮಾನವಿ, ಸಿಂಧನೂರ, ಮಸ್ಕಿ, ಲಿಂಗಸೂರು, ಕವಿತಾಳ, ದೇವದುರ್ಗ, ಗಬ್ಬೂರ, ಅರಕೇರಾ, ಸಿರವಾರ ಸೇರಿದಂತೆ ರಾಯಚೂರು ಜಿಲ್ಲೆಯಾದ್ಯಂತ ಸಂಚರಿಸಲಿದೆ. ರಾಯಚೂರು ಉತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ನಾನಾ ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ಒದಗಿಸುವ ದಿಶೆಯಲ್ಲಿ ಈ ಜ್ಯೋತಿ ರಥಯಾತ್ರೆ ಸಂಚರಿಸಲಿದೆ.
ಜಿಲ್ಲಾಧಿಕಾರಿಗಳ ಮನವಿ: ಈ ಜ್ಯೋತಿ ರಥಯಾತ್ರೆಯು ಫೆ.01ರ ಬೆಳಿಗ್ಗೆ 10 ಗಂಟೆಗೆ ರಾಯಚೂರು ನಗರದ ಕರ್ನಾಟಕ ಸಂಘದಿಂದ ಪ್ರಾರಂಭವಾಗಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಸಿಬ್ಬಂದಿಯೊಂದಿಗೆ ತಪ್ಪದೇ ಹಾಜರಾಗಬೇಕು. ಶಾಲಾ-ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಥಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *