ಸಿಂಧನೂರು:ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜು ಸಿಂಧನೂರಿನಲ್ಲಿ ಹುತಾತ್ಮರ ದಿನದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರ ತ್ಯಾಗ ಮತ್ತು ಅಹಿಂಸಾ ತತ್ವಗಳನ್ನು ಸ್ಮರಿಸಿ, ಮೌನಾಚರಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು.ಕಾರ್ಯಕ್ರಮದ ವೇಳೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಇರ್ಫಾನ್ ಕೆ ಅವರು ಮಹಾತ್ಮ ಗಾಂಧೀಜಿ ಅವರ ಜೀವನ ಮೌಲ್ಯಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಅವರ ಕೊಡುಗೆ ಕುರಿತು ಮಾತನಾಡಿದರು.ಈ ಸಂದರ್ಭದಲ್ಲಿ ನರ್ಸಿಂಗ್ ಪ್ರಾಚಾರ್ಯರಾದ ಸಿರಿಲ್, ಪ್ಯಾರಾಮೆಡಿಕಲ್ ಪ್ರಾಚಾರ್ಯರಾದ ಚಕ್ರವರ್ತಿ, ಫಾರ್ಮಸಿ ಪ್ರಾಚಾರ್ಯರಾದ ವಾಸೀಂ ಹುಸೇನ್, ವಿವಿಧ ವಿಭಾಗಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಗೌರವವನ್ನರ್ಪಿಸಿದರು.


