ಬೆಂಗಳೂರು: 2025-26ನೇ ಸಾಲಿನ ರಾಜ್ಯ ಆಯವ್ಯಯ ಭಾಷಣದ ಕಂಡಿಕೆ–124ರ ಘೋಷಣೆಯಂತೆ, ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ ಒಟ್ಟು 2000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸಹಮತ ಸೂಚಿಸಲಾಗಿದೆ.ಆರ್ಥಿಕ ಇಲಾಖೆ (ವೆಚ್ಚ–8) ವತಿಯಿಂದ 28-01-2026ರಂದು ಈ ಕುರಿತು ಅನುಮೋದನಾ ಟಿಪ್ಪಣಿ ಹೊರಡಿಸಲಾಗಿದೆ. ಈ ನಿರ್ಧಾರಕ್ಕೆ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆಯೂ ಲಭ್ಯವಾಗಿದೆ.
ಅನುಮೋದಿತ ಹುದ್ದೆಗಳ ವಿವರ ಹೀಗಿದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು — 826 ಹುದ್ದೆಗಳು
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳು — 941 ಹುದ್ದೆಗಳು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು — 186 ಹುದ್ದೆಗಳು
ಯುವಿಸಿಇ ವಿಶ್ವವಿದ್ಯಾಲಯ — 47 ಹುದ್ದೆಗಳು ಒಟ್ಟು — 2000 ಬೋಧಕ ಹುದ್ದೆಗಳು ಯುವಿಸಿಇ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 47 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯನ್ನು ಪ್ರತ್ಯೇಕವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇದಕ್ಕೂ ಹೊರತಾಗಿ, ಹೊಸ ಹುದ್ದೆಗಳನ್ನು ಸೃಜಿಸುವುದು ಹಾಗೂ ಅವುಗಳನ್ನು ಅತಿಥಿ ಉಪನ್ಯಾಸಕರ ಮೂಲಕ ತಾತ್ಕಾಲಿಕವಾಗಿ ಭರ್ತಿ ಮಾಡುವ ಕುರಿತು ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಆಡಳಿತ ಇಲಾಖೆಗೆ ತಿಳಿಸಲಾಗಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರಜಿತ್ ಕೆ.ಎಂ. ನಂಬಿಯಾರ್ ಅವರು ಡಿಜಿಟಲ್ ಸಹಿಯೊಂದಿಗೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *