ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಭೋಸರಾಜು ಅವರು ಫೆ.01ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅದು ಬೆಳಿಗ್ಗೆ 11.10ಕ್ಕೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ 11.40ಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೆಲಿಪ್ಯಾಡ್‌ಗೆ ಆಗಮಿಸುವರು. ಅಲ್ಲಿಂದ ರಸ್ತೆ ಮಾರ್ಗವಾಗಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್‌ನ ಶ್ರೀಕಾಗಿನೆಲೆ ಮಹಾಸಂಸ್ಥಾನಕ್ಕೆ ಆಗಮಿಸಿ, ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಿಂದ ಆಯೋಜಿಸಿರುವ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀಸಿದ್ದರಾಮನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ ಕಾರ್ಯಕ್ರಮ ಹಾಗೂ ನುಡಿನಮನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗಿಯಾಗುವರು.
ಮಧ್ಯಾಹ್ನ 3.30ಕ್ಕೆ ತಿಂಥಣಿ ಬ್ರಿಜ್‌ನ ಶ್ರೀಕಾಗಿನೆಲೆ ಮಹಾಸಂಸ್ಥಾನದಿAದ ನಿರ್ಗಮಿಸಿ, ಬಂಡೊಳ್ಳಿ ಗ್ರಾಮದ ಹೆಲಿಪ್ಯಾಡದಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

