ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಜಿಲ್ಲಾ ಮತ್ತು ತಾಲ್ಲೂಕು ಮರಳು ಸಮಿತಿ ಸದಸ್ಯರಿಂದ ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತಂತೆ ಪ್ರಕರಣಗಳನ್ನು ದಾಖಲು ಮಾಡಿದ್ದು, ಈ ಪ್ರಕರಣಗಳಲ್ಲಿ ಮರಳನ್ನು ಇಲಾಖೆಯ ವಶಕ್ಕೆ ಪಡೆಯಲಾಗಿದೆ.
ಈ ಜಪ್ತು ಮರಳನ್ನು ಸರ್ಕಾರಿ ಕಾಮಗಾರಿಗಳಿಗೆ ಉಪಯೋಗಿಸಲು ಜಿಲ್ಲಾ ಮರಳು ಸಮಿತಿಯಿಂದ ಪ್ರತಿ ಮೆಟ್ರಿಕ್ ಟನ್‌ಗೆ 541 ರೂ.ಗಳಂತೆ ದರ ನಿಗದಿಪಡಿಸಿದ್ದು, ಈ ಜಪ್ತು ಮರಳನ್ನು ಲೋಕೋಪಯೋಗಿ ಇಲಾಖೆ, ಭೂಸೇನೆ, ಸಣ್ಣ ನೀರಾವರಿ, ಪಿಆರ್‌ಇಡಿ, ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ರೈಲ್ವೆ, ಕೆ.ಕೆ.ಆರ್.ಡಿ.ಬಿ, ಪ್ರಮುಖ ನೀರಾವರಿ ಇಲಾಖೆಗಳು ಹಾಗೂ ಇತರೆ ಸರ್ಕಾರಿ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಮಗಾರಿಗಳಿಗೆ ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಸರ್ಕಾರಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಮಗಾರಿಗಳಿಗೆ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಪರ್ಕಿಸಬಹುದಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
