ಮಾನ್ವಿ : ಪಟ್ಟಣದ ಸರಕಾರಿ ನೌಕರರ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ (ರಿ)ಮಾನ್ವಿ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಲಿಂಗಪ್ಪ ನಾಯಕ ಆಯ್ಕೆಯಾಗಿದ್ದಾರೆ. ಅದೇ ರೀತಿಯಾಗಿ ಗೌರವ ಅಧ್ಯಕ್ಷರಾಗಿ ನರಸಿಂಹ ಮತ್ತು ಕಾರ್ಯದರ್ಶಿಯಾಗಿ ಶ್ರೀನಿವಾಸ್ ಜಾಲ್ದಾರ್ ಆಯ್ಕೆಯಾಗಿದ್ದಾರೆ.ಮಾನ್ವಿ ತಾಲೂಕಿನ ನೌಕರರ ಸಂಘದ ಅಧ್ಯಕ್ಷರಾದ ಸುರೇಶ ಕುರ್ಡಿ, ಪ್ರಧಾನ ಕಾರ್ಯದರ್ಶಿಯಾದ ಹಂಪಣ್ಣ ಚಂಡೂರು, ಖಜಾಂಚಿಯಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಭಾಗಯ್ಯ ನಾಯಕ, ಜಿಲ್ಲಾ ಸಂಘಟನ ಕಾರ್ಯದರ್ಶಿ ಯಾದ ತಿಮ್ಮೇಶ ನಾಯಕ, ಚಂದ್ರಶೇಖರ ಹೂಗಾರ, ಶಂಕ‌ರ್, ರಾಮು ಹೊಳೆಯಪ್ಪ , ಈರಣ್ಣ , ಗೋಪಾಲ ನಾಯಕ, ಮಲ್ಲಿಕಾರ್ಜುನ, ಶ್ರೀನಿವಾಸ ಇತರರು ಸೇರಿ ಆಯ್ಕೆ ಮಾಡಿದ್ದಕ್ಕಾಗಿ ರಾಮಲಿಂಗಪ್ಪ ನಾಯಕ ಅಭಿನಂದನೆಗಳು ತಿಳಿಸಿದ್ದಾರೆ. ನಂತರ ಮಾತನಾಡಿ ಕೊಟ್ಟಂತಹ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *