ಮಸ್ಕಿ ಎರಡನೇ ಶ್ರೀಶೈಲ ಎಂದೇ ಪ್ರಸಿದ್ಧಿ ಪಡೆದಿರುವ ಈ ಭಾಗದ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಐತಿಹಾಸಿಕ ಮಲ್ಲಿಕಾರ್ಜುನ ಸ್ವಾಮಿಯ ಮಹಾರಥೋತ್ಸವವು ರವಿವಾರ ಭಕ್ತರ ಜಯ ಘೋಷಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ನಂತರ ಪಾಟೀಲ್ ನ್ಯೂಸ್ ಅಲರ್ಟ್ ಸುದ್ದಿಯೊಂದಿಗೆ ದೇವಸ್ಥಾನದ ಅರ್ಚಕರಾದ ವಿಶ್ವನಾಥ ಸೊಪ್ಪಿಮಠ ಮಾತನಾಡಿದರು,
ಬೆಳಿಗ್ಗೆ ದೇವಸ್ಥಾನದಲ್ಲಿ
ಮಲ್ಲಿಕಾರ್ಜುನ ಲಿಂಗಕ್ಕೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ನಂತರ ರಥೋತ್ಸವದ ಕಳಸ ಪ್ರತಿಷ್ಠಾಪನೆ ನಡೆಯಿತು.
ಸಂಜೆ ಐದು ಗಂಟೆಗೆ ಮಲ್ಲಿಕಾರ್ಜುನನ ಉತ್ಸವ ಮೂರ್ತಿ ಹೊತ್ತ ಪಲ್ಲಕ್ಕಿಯನ್ನು ರಥದ ಸುತ್ತ ಐದು ಬಾರಿ ಪ್ರದಕ್ಷಿಣಿ ಹಾಕಿಸಿದ ನಂತರ ಪಲ್ಲಕ್ಕಿಯಲ್ಲಿನ ಉತ್ಸವ ಮೂರ್ತಿಯನ್ನು ಭಕ್ತರ ಜಯಘೋಷಗಳ ನಡುವೆ ಮೇಲೆ ಪ್ರತಿಷ್ಠಾಪಿಸಲಾಯಿತು.

ಮಸ್ಕಿಯ ಗಚ್ಚಿನ ಹಿರೇಮಠದ ವರರುದ್ರಮುನಿ ಶಿವಾಚಾರ್ಯರ
ಮಹಾ ಸ್ವಾಮಿಗಳು ರಥಕ್ಕೆ ಧಾರ್ಮಿಕ ವಿಧಿ-ವಿಧಾನಗಳಂತೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.ಭಕ್ತರು ಉತ್ತುತ್ತಿ ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.

ಭೋವಿ ಸಮಾಜದ ಅನೇಕ ಯುವಕರು ದಿನ ಉಪವಾಸ ಹಾಗೂ ಮಡಿವಂತಿಕೆಯಿಂದ ತೆರಿನ ಕೆಳಗೆ ಇದ್ದು ರಥಕ್ಕೆ ಸೊನ್ನೆ ಹಾಕುವ ಮೂಲಕ ರಥೋತ್ಸವದ ಯಶಸ್ವಿಗೆ ಕಾರಣರಾದರು

ಈ ವೇಳೆ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್ ಬಸನಗೌಡ ತುರುವಿಹಾಳ, ಮಾಜಿ ಶಾಸಕ
ಪ್ರತಾಪ್ ಗೌಡ ಪಾಟೀಲ್, ಹಿರಿಯ ಮುಖಂಡರಾದ ಮಾದೇವಪ್ಪ ಗೌಡ ಪೊಲೀಸ್ ಪಾಟೀಲ್,
ಮಲ್ಲಿಕಾರ್ಜುನ ದೇವಸ್ಥಾನದ ಅರ್ಚಕರಾದ, ವಿಶ್ವನಾಥ ಸೊಪ್ಪಿಮಠ, ಸಿದ್ದಯ್ಯ ಹೆಸರೂರು ಹಿರೇಮಠ, ಸೇರಿದಂತೆ ಊರಿನ ಪ್ರಮುಖ ಮುಖಂಡರು ಹಾಗೂ ಭಕ್ತರು ಇದ್ದರೂ. ಹಾಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಸ್ಕಿ ಸರ್ಕಲ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ ಒದಗಿಸಲಾಗಿತ್ತು.

Leave a Reply

Your email address will not be published. Required fields are marked *