ಕೊಪ್ಪಳ : ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಫೆ. 5 ರಿಂದ ಎರಡು ದಿನ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಅವರು ಫೆ.5 ರಂದು ಬೆಳಗ್ಗೆ 6.30 ಗಂಟೆಗೆ ಕೊಪ್ಪಳಕ್ಕೆ ಬಂದು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಸಂವಾದ.ಮಧ್ಯಾಹ್ನ 2ಕ್ಕೆ ಕೊಪ್ಪಳದ ವಾರ್ಡ್ ನಂ.28, ಸಿದ್ದೇಶ್ವರ ನಗರದ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ, ಅಲೆಮಾರಿ ಮಹಿಳೆಯರ ಸಮಸ್ಯೆಗಳನ್ನು ಆಲಿಸುವರು. ಅಂದು ಮಧ್ಯಾಹ್ನ 3ಕ್ಕೆ ತಾಪಂ ಸಭಾಂಗಣದಲ್ಲಿ ದೇವದಾಸಿ ಮಹಿಳೆಯರೊಂದಿಗೆ ಸಂವಾದ ನಡೆಸಿ. ಸಂಜೆ 6ಕ್ಕೆ ಅಲ್ಪಸಂಖ್ಯಾತರ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿನಿಲಯಕ್ಕೆ ಭೇಟಿ ನೀಡಿದ ನಂತರ ಕೊಪ್ಪಳದಲ್ಲಿ ವಾಸ್ತವ್ಯ.
ಮರುದಿನ ಬೆಳಗ್ಗೆ 10 ಗಂಟೆಗೆ ಕೊಪ್ಪಳ ವೈದ್ಯಕಿಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಬೆಳಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದಲ್ಲಿ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸುವ ಪಿಓಎಸ್ಎಚ್ ತರಬೇತಿ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.15 ಕ್ಕೆ ಕುಷ್ಟಗಿ ತಾಲೂಕು ಆಸ್ಪತ್ರೆಗೆ ಭೇಟಿ. ಮಧ್ಯಾಹ್ನ 3ಕ್ಕೆ ಕುಷ್ಟಗಿ ಪೊಲೀಸ್ ಠಾಣೆಗೆ ಭೇಟಿ. ಅಂದು ಸಂಜೆ 5 ಗಂಟೆಗೆ ಕುಷ್ಟಗಿ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ, ನಂತರ ಕೊಪ್ಪಳಕ್ಕೆ ಆಗಮಿಸಿ, ವಾಸ್ತವ್ಯ ಮಾಡುವರು.
ಕೊನೆಯ ದಿನವಾದ ಫೆ.7 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಮಹಿಳಾ ಸ್ಪಂದನಾ ಕಾರ್ಯಕ್ರಮ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಿ. ಮಧ್ಯಾಹ್ನ 3ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೋಳ್ಳುವರು. ಅಂದು ಸಂಜೆ 6.30ಕ್ಕೆ ಕೊಪ್ಪಳದಿಂದ ರೈಲಿನ ಮೂಲಕ ಬೆಂಗಳೂರು ಕಡೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *