ಬಳಗಾನೂರು: ಬಳಗಾನೂರಿನ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಭಕ್ತಿಭಾವದಿಂದ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಧಿಕಾರಿಗಳು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು. ಮಾತನಾಡಿದ ಗಣ್ಯರು ಮಡಿವಾಳ ಮಾಚಿದೇವರು ಸಮಾಜಕ್ಕೆ ನೀಡಿದ ಸೇವೆ, ಶ್ರಮ ಹಾಗೂ ಸಮಾನತೆಯ ಸಂದೇಶಗಳು ಇಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.
