ನರ ಮತ್ತು ಚರ್ಮದ ಖಾಯಿಲೆಯಾಗಿರುವ ಹಾಗೂ ಶತ ಶತಮಾನಗಳಿಂದ ಇಂದಿಗೂ ಸಮುದಾಯದಲ್ಲಿರುವ ಕುಷ್ಠರೋಗವನ್ನು ನಿರ್ಮೂಲನೆ ಮಾಡಲು, ಯಾರಿಗಾದರೂ ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಇದ್ದಲ್ಲಿ, ಕೈಕಾಲುಗಳಲ್ಲಿ ಜೋಮು ಕಂಡು ಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ ಖಚಿತಪಟ್ಟಲ್ಲಿ ಚಿನ್ಹೆಗಳ ಆಧಾರದ ಮೇಲೆ 6 ತಿಂಗಳಿನಿಂದ ಒಂದು ವರ್ಷದ ಅವಧಿಯ ಉಚಿತ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಲು ಮಹಾತ್ಮಾ ಗಾಂಧೀಜಿಯವರ ಕನಸು ನನಸು ಮಾಡಲು ನಾವೆಲ್ಲರೂ ಜಾಗೃತಿ ನೀಡೋಣವೆಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನದಡಿ ರಾಯಚೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಈರಣ್ಣ ಕೋಸಗಿ ರವರ ನೇತೃತ್ವದಲ್ಲಿ ನಗರದ ಸ್ಟೇಶನ್ ರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆ ಪ್ರತಿಜ್ಞೆ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ರಾಗಿಮಾನಗಡ್ಡಾ ನಗರ ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ ಡಾ ಅಸ್ಫಾಕ್ ಹುಸೇನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಮುಖ್ಯ ಶಿಕ್ಷಕರಾದ ಶ್ರೀನಿವಾಸ ರೆಡ್ಡಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜ ಕೆ, ಹೆಚ್‌ಐಓ ಅರುಣ್ ಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಮರಿಯಾ ರಾಣಿ, ಆಶಾ ಕಾರ್ಯಕರ್ತೆ ಬಸವೇಶ್ವರಿ ಸೇರಿದಂತೆ ಸಹ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

