ರಾಯಚೂರು ಫೆಬ್ರವರಿ 02 (ಕರ್ನಾಟಕ ವಾರ್ತೆ): ಇಲ್ಲಿನ ರೇಷ್ಮೆ ಇಲಾಖೆಯಿಂದ 2023-24 ಹಾಗೂ 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಅರ್ಹ ರೇಷ್ಮೆ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರು ಕನಿಷ್ಠ 1.00 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ ಅಥವಾ ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು ಅಥವಾ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿಗಳನ್ನು ದಾಖಲಾತಿಗಳೊಂದಿಗೆ ಒದಗಿಸಿ ಅರ್ಜಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 06-02-2026ರ ಒಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-220322ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ರೇಷ್ಮೆ ಇಲಾಖೆಯ ರೇಷ್ಮೆ ಕೃಷಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *