ಲಿಂಗಸಗೂರು : ಫೆ, 03 –

ಶಿಕ್ಷಣವು ಒಬ್ಬ ವ್ಯಕ್ತಿಯ ಭವಿಷ್ಯ ರೂಪಿಸುವ ಶಕ್ತಿಶಾಲಿ ಅಸ್ತ್ರವಾಗಿದೆ. ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನ, ಮೌಲ್ಯಗಳ ಕಲಿಕೆ ಮತ್ತು ಯಶಸ್ವಿ ಜೀವನಕ್ಕೆ ಭದ್ರ ಬುನಾದಿಯಾಗಿದೆ ಎಂದು ಶ್ರೀ ಉಮಾಮಹೇಶ್ವರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ವಿನಯಕುಮಾರ ಗಣಾಚಾರಿ ಹೇಳಿದರು.

ಅವರಿಂದು ಉಮಾಮಹೇಶ್ವರಿ ಕಾಲೇಜಿನಲ್ಲಿ ಜ್ಯೂನಿಯ‌ರ್ ಜೀನಿಯಸ್ ಅವಾರ್ಡ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣವು ಜ್ಞಾನ, ಕೌಶಲ್ಯ, ಮೌಲ್ಯಗಳು ಮತ್ತು ಅಭ್ಯಾಸಗಳನ್ನು ಕಲಿಯುವ ಪ್ರಕ್ರಿಯೆಯಾಗಿದೆ. ಇದು ವ್ಯಕ್ತಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಲು ಸಹಾಯ ಮಾಡುತ್ತದೆ, ಭವಿಷ್ಯದ ಸವಾಲುಗಳಿಗೆ ಅವರನ್ನು ಸಿದ್ಧಪಡಿಸುತ್ತದೆ ಮತ್ತು ಸಮಾಜದ ಪ್ರಗತಿಯನ್ನು ರೂಪಿಸುತ್ತದೆ ಎಂದು ಹೇಳಿದರು.

ವಿಜ್ಞಾನ ವಿಭಾಗದ ಪ್ರಾಚಾರ್ಯ
ಜಿ.ವಿ.ಸುರೇಶ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ನಮ್ಮ ನಮ್ಮ ಯೋಚನಾ ಶಕ್ತಿಯನ್ನು ಕಾಲಕ್ಕೆ ತಕ್ಕಂತೆ ಹೆಚ್ಚಿಸಿಕೊಳ್ಳಬೇಕು ಮತ್ತು ಕಾಲಕ್ಕೆ ತಕ್ಕಂತೆ ಹೊಸ ಹೊಸ ಅವಿಷ್ಕರದತ್ತ
ಮುನ್ನುಗ್ಗಬೇಕು. ಚಿಕ್ಕಂದಿನಿಂದಲೆ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಉಪನ್ಯಾಸಕಿ ಶಶಿರೇಖಾ, ಮುಖ್ಯೋಪಾದ್ಯಾಯ ಸುವರ್ಣ ತೋಟದ ಸೇರಿದಂತೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಇದ್ದರು .

Leave a Reply

Your email address will not be published. Required fields are marked *