ಜಿಲ್ಲಾ ಮಟ್ಟದ ಸಾಂಸ್ಕೃತಿಕ ವಿವಿಧ ಸ್ಪರ್ಧೆಗಳಲ್ಲಿ ಎಕ್ಸಲೆಂಟ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಐದು ಸ್ಪರ್ಧೆಗಳಲ್ಲಿ ದ್ವಿತೀಯ ಮತ್ತು ಎರಡು ಸ್ಪರ್ಧೆಗಳಲ್ಲಿ ತೃತೀಯ ಸ್ಥಾನವನ್ನು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಜನಪದ ಗೀತೆ ಸ್ಪರ್ಧೆಯಲ್ಲಿ ಫಕೀರಮ್ಮ ದ್ವಿತೀಯ ಸ್ಥಾನ, ಚಿತ್ರಕಲಾ ಸ್ಪರ್ಧೆಯಲ್ಲಿ ಅನಿಲ್ ಕುಮಾರ್ ದ್ವಿತೀಯ ಸ್ಥಾನ, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪಾರ್ವತಿ ದ್ವಿತೀಯ ಸ್ಥಾನ, ಇಂಗ್ಲೀಷ ಪ್ರಬಂಧ ಸ್ಪರ್ಧೆಯಲ್ಲಿ ಶಾಂಭವಿ ದ್ವಿತೀಯ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಮೌನಿಕ ದ್ವಿತೀಯ ಸ್ಥಾನ, ಭಾವಗೀತೆ ಸ್ಪರ್ಧೆಯಲ್ಲಿ ಹನುಮೇಶ ತೃತೀಯ ಸ್ಥಾನ, ರಸಪ್ರಶ್ನೆ ಸ್ಪರ್ಧೆಯಲ್ಲಿ ರಮ್ಯ ಮತ್ತು ವಿದ್ಯಾ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯವರು, ಕಾರ್ಯದರ್ಶಿ ಗಳಾದ ಎಂ ವೆಂಕಟರಾವ್,ಪ್ರಾಚಾರ್ಯರಾದ ಮಂಜುನಾಥ ಸೋಮಲಾಪುರ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ನಾಗರಾಜ ಮುಕ್ಕುಂದಾ ಹಾಗೂ ಉಪನ್ಯಾಸಕ ಬಳಗ ಅಭಿನಂದಿಸಿದ್ದಾರೆ.
