ಮಾನ್ವಿ : ತಾಲೂಕಿನ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸರ್ವೆ ಕಾರ್ಯದಲ್ಲಿ ಭಾಗವಹಿಸಿದ ಗಣಿತಿದಾರರು ಹಾಗೂ ಮೇಲ್ವಿಚಾರಕರಿಗೆ ಗಳಿಕೆ ರಜೆ (EL) ಹಾಜರಾತಿ ಪ್ರಮಾಣ ಪತ್ರ ನೀಡುವ ಮೂಲಕ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಅಧ್ಯಕ್ಷ ಸುರೇಶ್ ಕುರ್ಡಿ ಹೇಳಿದರು.

ಅವರಿಂದು ಮಾನ್ವಿ ತಹಸೀಲ್ದಾರ್ ಕಚೇರಿಯಲ್ಲಿ ಗ್ರೇಡ್–2 ತಹಸೀಲ್ದಾರ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡುತ್ತಾ, ರಾಜ್ಯದ ಅನೇಕ ತಾಲೂಕುಗಳಲ್ಲಿ ಸರ್ವೆ ಕಾರ್ಯದಲ್ಲಿ ತೊಡಗಿದ್ದ ನೌಕರರಿಗೆ ಗಳಿಕೆ ರಜೆ ಹಾಜರಾತಿ ಪ್ರಮಾಣ ಪತ್ರವನ್ನು ನೀಡಲಾಗಿದೆ. ಅದೇ ರೀತಿಯಲ್ಲಿ ಮಾನ್ವಿ ತಾಲೂಕಿನಲ್ಲಿಯೂ ಕೂಡಲೇ ಸಂಬಂಧಿತ ಗಣಿತಿದಾರರು ಹಾಗೂ ಮೇಲ್ವಿಚಾರಕರಿಗೆ ಹಾಜರಾತಿ ಪ್ರಮಾಣ ಪತ್ರವನ್ನು ನೀಡುವಂತೆ ಒತ್ತಾಯಿಸಿದರು. ಸರ್ವೆ ಕಾರ್ಯದಲ್ಲಿ ಶ್ರಮಿಸಿದ ನೌಕರರಿಗೆ ನ್ಯಾಯ ಸಿಗುವಂತೆ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಕಾರ್ಯದರ್ಶಿ ಹಂಪಣ್ಣ ಚಂಡೂರು, ಖಜಾಂಚಿ ಭಾಗಯ್ಯ ನಾಯಕ, ಜಿಲ್ಲಾ ಉಪಾಧ್ಯಕ್ಷ ಸಿ.ಎಮ್. ನರಸಿಂಹ, ಪರಿಶಿಷ್ಟ ಪಂಗಡ ನೌಕರರ ಸಂಘದ ಅಧ್ಯಕ್ಷ ಈಶಪ್ಪ, ಸಹ ಕಾರ್ಯದರ್ಶಿ ಜಾಕೀರ್ ಪಾಷಾ ಹಾಗೂ ಮಹೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *