ಮಾನ್ವಿ: ಪಟ್ಟಣದ ಕಲ್ಮಠ ಪದವಿ ಪೂರ್ವ ಕಾಲೇಜಿನಲ್ಲಿ ಲಿಂ.ಡಾ.ಶಿವಮೂರ್ತಿಶಿವಾಚಾರ್ಯ ಮಹಾಸ್ವಾಮಿಗಳವರ ಪುಣ್ಯಸ್ಮರಣೆ ಅಂಗವಾಗಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ದತೆ ಹಾಗೂ ಪ್ರತಿಭಾನ್ವೇಶಣೆ ಕಾರ್ಯಕ್ರಮದಲ್ಲಿ ಲಿಂ.ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಉಪನ್ಯಾಸ ನೀಡಿ ಹಿರಿಯ ಸಾಹಿತಿ ರಮೇಶಬಾಬು ಯಾಳಗಿ ಮಾತನಾಡಿ ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಹೇಳುವ ಪಠ್ಯಕ್ರಮವನ್ನು ಚೆನ್ನಾಗಿ ಅರ್ಥ ಮಾಡಿಕೊಂಡು, ಪ್ರತಿ ವಿಷಯಕ್ಕೂ ನಿರ್ದಿಷ್ಟ ಸಮಯ ನಿಗದಿಪಡಿಸಿಕೊಂಡು, ನಿಯಮಿತವಾಗಿ ಅಭ್ಯಾಸ ಮಾಡುವುದರಿಂದ ಮತ್ತು ಹಳೆಯ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವುದರಿಂದ ಪರೀಕ್ಷೆಯ ಮಾದರಿ ತಿಳಿಯುತ್ತದೆ ಮತ್ತು ಆತ್ಮವಿಶ್ವಾಸ ಹೆಚ್ಚುತ್ತದೆ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಕೊಳ್ಳುವುದಕ್ಕೆ ಕೂಡ ಸಾಧ್ಯವಾಗುತ್ತದೆ. ಜೀವನದ ಪ್ರತಿ ಕ್ಷಣದಲ್ಲಿಯು ಕೂಡ ಅನೇಕ ಪರೀಕ್ಷೆಗಳನ್ನುನಾವುಗಳು ಎದುರಿಸಬೇಕಾಗುತ್ತದೆ ಅದ್ದರಿಂದ ಸೋಲು ಮತ್ತು ಗೇಲುವುಗಳನ್ನು ಸಹಜವಾಗಿ ಸ್ವೀಕರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಪಡೆಯುವುದಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಸಂಗಯ್ಯಸ್ವಾಮಿ ಮಾತನಾಡಿ ಪ್ರತಿ ವರ್ಷ ಕಲ್ಮಠ ಕಾಲೇಜು ವತಿಯಿಂದ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭ ಆನ್ವೇಶಣಾ ಪರೀಕ್ಷೆಯನ್ನು ನಡೆಸಿ ಪ್ರತಿಭವಂತ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕೆ ಅನುಕೂಲವಾಗುವಂತೆ ಅತಿ ಹೆಚ್ಚು ಅಂಕಗಳನ್ನು ಪಡೆದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ 15 ಸಾವಿರ ರೂ ಹಾಗೂ ದ್ವೀತಿಯ ಬಹುಮಾನವಾಗಿ 10 ಸಾವಿರ ರೂ ನೀಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ಎಸ್.ಪಾಟೀಲ ,ಕಲ್ಮಠ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಕೆಮ್ಯಾನಾಯಕ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಭಯ್ಯ ಸ್ವಾಮಿ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಸಿದ್ದನಗೌಡ ಪಾಟೀಲ, ಎನ್.ಎಸ್.ಎಸ್.ಅಧಿಕಾರಿ ವಿರುಪಣ್ಣ ಪಾಟೀಲ್ ಉಪನ್ಯಾಸಕ ಅಯ್ಯಪ್ಪ ವಿಶ್ವಕರ್ಮ, ಹನುಮಂತಪ್ಪ ಇದ್ದರು.

ಮಾನ್ವಿ: ಪಟ್ಟಣದ ಕಲ್ಮಠ ಪದವಿ ಪೂರ್ವ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ದತೆ ಹಾಗೂ ಪ್ರತಿಭಾನ್ವೇಶಣೆ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *