ರಾಯಚೂರು ಫೆಬ್ರವರಿ 03 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.05, 06, ಹಾಗೂ 07ರಂದು ಮೂರು ದಿನಗಳ ಕಾಲ ನಡೆಯುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಕ್ಕೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ.5ರ ಸಂಜೆ 6 ಗಂಟೆಗೆ ಚಾಲನೆ ಸಿಗಲಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸುವರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್.ತಂಗಡಗಿ, ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಘನ ಉಪಸ್ಥಿತಿ ವಹಿಸುವರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಇಂಧನ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕೆ.ಪಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಗೌರವ ಗುಪ್ತಾ, ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್, ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಸೆಲ್ವಕುಮಾರ ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಜೆ.ಮಂಜುನಾಥ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ.ಎಂ.ಗಾಯಿತ್ರಿ, ಹಟ್ಟಿ ಚಿನ್ನದ ಗಣಿ ನಿಯಮಿತದ ವ್ಯವಸ್ಥಾಪಕರಾದ ಶಿಲ್ಪಾ ಆರ್., ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮAತಪ್ಪ ಅವರು ಉಪಸ್ಥಿತರಿರುವರು.
ಗೌರವಾನ್ವಿತ ಆಹ್ವಾನಿತರಾಗಿ ನವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್.ರೆಡ್ಡಿ, ಆರ್.ಸಿ.ಎಮ್.ಎ ರಾಸಾಯನಿಕ ತಯಾರಿಕರ ಸಂಘದ ಅಧ್ಯಕ್ಷರಾದ ಡಾ.ರಮೇಶ, ಶಿಲ್ಪಾ ಮೆಡಿಕೇರ್ ಲಿಮಿಟೆಡ್ ಅಧ್ಯಕ್ಷರಾದ ವಿಷ್ಣುಕಾಂತ ಭುತಡ, ರೈಸ್ ಮಿಲ್ಲರನ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು, ಹೋಟಲ್ ಉದ್ಯುಮಿಗಳು, ವ್ಯಾಪಾರಸ್ಥರು, ಕೃಷಿ ಪರಿಕರ ಮಾರಾಟಗಾರರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಇಲಾಖೆಯ ಮತ್ತು ರಾಯಚೂರು ಜಿಲ್ಲೆಯ ಸಮಸ್ತ ನಾಗರೀಕರು ಉಪಸ್ಥಿತರಿರುವರು.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
