ತಾಳಿಕೋಟಿ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶರಣ ಶ್ರೀ ಮಡಿವಾಳ ಮಾಚಿದೇವರ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಬ. ಮಂಗಳೂರ ಅವರು ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಅರ್ಪಿಸಿ ಮಾತನಾಡಿ ಶ್ರೀ ಮಡಿವಾಳ ಮಾಚಿದೇವರು ಮೇಲು-ಕೀಳು ಹಾಗೂ ಮೂಢನಂಬಿಕೆಗಳನ್ನು ಧಿಕ್ಕರಿಸಿ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ. ಅವರ ಜೀವನ ಸಂದೇಶಗಳನ್ನು ಅರಿತು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಸಂತೋಷ ಪವಾರ, ಶಿಕ್ಷಕರಾದ ರಾಜು ಜವಳಗೇರಿ, ಬಸವರಾಜ ಸವದತ್ತಿ,ಭೀಮನಗೌಡ ಸಾಸನೂರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *