- ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಮುಂಗಾರು ಹಂಗಾಮಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು.
ರಾಜ್ಯ ಸರ್ಕಾರವು ರೈತರು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಫೆ.13 ರ ವರೆಗೆ ಹಾಗೂ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ವೇದಿಕೆ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಮೂಲಕ ಮಾರಾಟ ಮಾಡಿಕೊಳ್ಳಲು ಫೆ.21 ಕೊನೆಯ ದಿನ ಎಂದು ಅವಧಿ ವಿಸ್ತರಿಸಿದೆ.
ರೈತರು ನಿಗದಿತ ಅವಧಿಯಲ್ಲಿ ನೋಂದಣಿ ಮತ್ತು ಮಾರಾಟ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

